ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆ ಹಾಗೂ ಅಕ್ರಮ ತಡೆಗೆ ಜಿಲ್ಲೆಯ ವಿವಿದೆಢೆ ಚೆಕ್ ಪೋಸ್ಟ್’ಗಳಲ್ಲಿ ಬಿಗಿ ತಪಾಸಣೆ ನಡೆಲಾಗುತ್ತಿದ್ದು, ನಿನ್ನೆ ರಾತ್ರಿ ಅಪಾರ ಪ್ರಮಾಣದ ಅಕ್ಕಿ ಹಾಗೂ ಲಿಕ್ಕರ್ ವಶಕ್ಕೆ ಪಡೆಯಲಾಗಿದೆ.
ಆಲ್ಕೊಳ ವೃತ್ತದ ಬಳಿ ಇದ್ದ ಚೆಕ್ ಪೋಸ್ಟ್’ನಲ್ಲಿ ಸೂಕ್ತ ದಾಖಲಾತಿ ಇಲ್ಲದೆ 1,60,000 ರೂ. ಮೌಲ್ಯದ 26 ಬ್ಯಾಗ್ ಅಕ್ಕಿ ಹಾಗೂ ಇದನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ತಪಾಸಣೆ ವೇಳೆ ಪರಿಶೀಲನೆ ನಡೆಸಲಾಗಿದ್ದು, ಈ ಅಕ್ಕಿಗೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ, ಇವುಗಳನ್ನು ವಶಕ್ಕೆ ಪಡೆಯಲಾಗಿದೆ.
ಮದ್ಯ ವಶಕ್ಕೆ
ಇನ್ನು, ಶಿವಮೊಗ್ಗ ತಾಲೂಕಿನ ದೇವಬಾಳ-ಯಡವಾಲದ ಕೆರೆ ಏರಿ ರಸ್ತೆಯಲ್ಲಿ ಕಾರಿನಲ್ಲಿ ಸುಮಾರು 20.790 ಲೀಟರ್ ಮದ್ಯ ಮತ್ತು 56.270 ಲೀಟರ್ ಬಿಯರ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 3,21,939 ರೂ. ಎಂದು ಅಂದಾಜು ಮಾಡಲಾಗಿದೆ.
ಚೆಕ್ ಪೋಸ್ಟ್’ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದು, ಈ ವೇಳೆ ಅಕ್ರಮ ಮದ್ಯ ಕಂಡು ಬಂದಿದ್ದು ವಶಕ್ಕೆ ಪಡೆಯಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















