ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ಕೆಆರ್’ಎಸ್ ರೈಲ್ವೆ ನಿಲ್ದಾಣದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿಯವರು ಆಗಸ್ಟ್ 10ರಂದು ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ಹಂತದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಿಲ್ದಾಣದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ರೈಲ್ವೆ ರಕ್ಷಣಾ ಪಡೆ (ಆರ್’ಪಿಎಫ್), ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್’ಪಿ) ಮತ್ತು ಸ್ಥಳೀಯ ಪೊಲೀಸರು ಬಹು-ಹಂತದ ಭದ್ರತೆಯನ್ನು ಒದಗಿಸಲಾಗಿದೆ.
ಬಾಂಬ್ ಸ್ನಿಫಿಂಗ್ ಶ್ವಾನ ದಳಗಳ ನಿಯೋಜನೆ, ಹೆಚ್ಚುವರಿ ಆರ್’ಪಿಎಫ್, ರೈಲ್ವೆ ರಕ್ಷಣಾ ವಿಶೇಷ ಪಡೆ (ಆರ್’ಪಿಎಸ್,ಎಫ್) ಮತ್ತು ಜಿಆರ್’ಪಿ ಸಿಬ್ಬಂದಿ, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್’ಗಳು, ಹ್ಯಾಂಡ್-ಹೆಲ್ಡ್ ಮೆಟಲ್ ಡಿಟೆಕ್ಟರ್’ಗಳು ಮತ್ತು ಬ್ಯಾಗೇಜ್ ಸ್ಕ್ಯಾನರ್’ಗಳ ಬಳಕೆ ಭದ್ರತಾ ಕ್ರಮಗಳಲ್ಲಿ ಸೇರಿವೆ. ನಿಲ್ದಾಣದಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣವಿರುತ್ತದೆ.
ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಮತ್ತು ಹುಬ್ಬಳ್ಳಿಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತರು/ಆರ್’ಎಸ್ಪಿ ಸಿಂಗ್ ಅವರು ಇಂದು ವ್ಯವಸ್ಥೆಗಳನ್ನು ಪರಿಶೀಲಿಸಿದರು.ಪ್ರಯಾಣಿಕರು ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಲು ಮತ್ತು ಸ್ಕ್ರೀನಿಂಗ್’ಗೆ ಸಮಯವನ್ನು ನೀಡಲು ಮುಂಚಿತವಾಗಿ ನಿಲ್ದಾಣವನ್ನು ತಲುಪಲು ವಿನಂತಿಸಲಾಗಿದೆ.
ಕೆಎಸ್’ಆರ್ ಬೆಂಗಳೂರು ಮತ್ತು ಬೆಳಗಾವಿ ನಡುವಿನ ಹೊಸ ವಂದೇ ಭಾರತ್ ಎಕ್ಸ್’ಪ್ರೆಸ್ ಸೇವೆಗೆ ಹಸಿರು ನಿಶಾನೆ ತೋರಿಸಲು ಪ್ರಧಾನಿಯವರು ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post