ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ತಡ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್’ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬಾಳೆಬೈಲು ಸಮೀಪ ನಡೆದಿದೆ.
ಮೃತರನ್ನು ಸುದೀಪ್(25) ಹಾಗೂ ಸುಧೀಶ್(30) ಎಂದು ಗುರುತಿಸಲಾಗಿದೆ.
ಪಟ್ಟಣದ ಬಾಳೆಬೈಲಿನ ಆರ್’ಎಂಸಿ ಯಾರ್ಡ್ ಬಳಿ ತಡ ರಾತ್ರಿ 1:30 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.
ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದ್ದೆ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ. ಇಬ್ಬರು ಇಂದಿರಾನಗರ ಹಾಗೂ ಯಡೆಹಳ್ಳಿಕೆರೆಯವರು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post