ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಮಲೆನಾಡು ಭಾಗಕ್ಕೆ ಮತ್ತೊಂದು ಕೊಡುಗೆ ನೀಡಿದೆ.
ಈ ಕುರಿತಂತೆ ಗಮ ಮಂಡಳಿ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಎಚ್’ಬಿ ಅಧ್ಯಕ್ಷರನ್ನಾಗಿ ಜ್ಞಾನೇಂದ್ರ ಅವರನ್ನು ಆಯ್ಕೆ ಮಾಡಿರುವುದು ಈ ಭಾಗದಲ್ಲಿ ಹೊಸ ಹುರುಪನ್ನು ಮೂಡಿಸಿದೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲೇ ನಿಗಮ ಮಂಡಳಿಗಳ ನೇಮಕಾತಿ ನಡೆದು, ಶಿವಮೊಗ್ಗ ಜಿಲ್ಲೆಗೆ ಎರಡು ಸ್ಥಾನ ದೊರೆತಿರುವುದು ಸ್ವಾಗತಾರ್ಹವಾಗಿದೆ.
Get In Touch With Us info@kalpa.news Whatsapp: 9481252093
Discussion about this post