ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಸ್ರೋದ ಸಾವಿರಾರು ವಿಜ್ಞಾನಿಗಳ ವರ್ಷಗಳ ಶ್ರಮ, ಕೋಟ್ಯಂತರ ಭಾರತೀಯ ಪ್ರಾರ್ಥನೆ ಹಾಗೂ ತಿರುಪತಿ ತಿಮ್ಮಪ್ಪನ ಅನುಗ್ರಹ ಇಂದು ಫಲ ನೀಡಿದ್ದು, ಚಂದ್ರಯಾನ-3 #Chandrayana3 ವಿಕ್ರಂ ಲ್ಯಾಂಡರ್ #VikramLander ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಗುವಲ್ಲಿ ಯಶಸ್ವಿಯಾಗಿದ್ದು, ಈ ಮೂಲಕ ವಿಶ್ವದಲ್ಲಿ ಐತಿಹಾಸಿಕ ದಾಖಲೆ ಬರೆದಿದೆ.
ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಸಂಶೋಧನಾ ಕೇಂದ್ರದಿಂದ ಉಡಾವಣೆಗೊಂಡಿದ್ದು, ಚಂದ್ರಯಾನ-3 ರೋವರ್ ಇಂದು 6 ಗಂಟೆ 4 ನಿಮಿಷಕ್ಕೆ ಸಾಫ್ಟ್ ಲ್ಯಾಂಡ್ ಆಗಿದೆ.
ಈ ಮೂಲಕ ಇಸ್ರೋ ವಿಜ್ಞಾನಿಗಳು ವರ್ಷಗಳ ಶ್ರಮಕ್ಕೆ ಫಲ ದೊರೆತಿದ್ದು, ಬಾಹ್ಯಾಕಾಶ ಲೋಕದಲ್ಲಿ ಭಾರತ ಹೊಸ ದಾಖಲೆಯನ್ನು ಬರೆದಿದೆ.
ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಇಸ್ರೋ #ISRO ವಿಜ್ಞಾನಿಗಳಿಗೆ ಶುಭಾಷಯಗಳು ಹರಿದು ಬರುತ್ತಿವೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ.
ವೇಗವನ್ನು ಕಡಿಮೆ ಮಾಡಲು ನಾಲ್ಕು ಥ್ರಸ್ಟರ್ ಎಂಜಿನ್‌ಗಳ ರೆಟ್ರೊ ಫೈರಿಂಗ್‌ನೊಂದಿಗೆ ವಿಕ್ರಮ್ ಲ್ಯಾಂಡರ್‌ನ ಚಾಲಿತ ಬ್ರೇಕಿಂಗ್ ಪ್ರಾರಂಭವಾಯಿತು. ನಂತರ ಕೊನೆಯ 17 ನಿಮಿಷಗಳು ಕಠಿಣ ಸವಾಲು ಎಂದು ವಿಜ್ಞಾನಿಗಳು ಹೇಳಿದ್ದರು.
ಇಂತಹ ಐತಿಹಾಸಿಕ ದಾಖಲೆ ಬರೆದು ಇಡಿಯ ವಿಶ್ವದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಇಸ್ರೋ ವಿಜ್ಞಾನಿಗಳನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post