No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇಂದು ಅನಂತ ಚತುರ್ದಶಿ: ವ್ರತ ಮಹತ್ವ ಹೀಗಿದೆ ನೋಡಿ

kalpa News by kalpa News
September 23, 2018
in Special Articles
0
Share on FacebookShare on TwitterShare on WhatsApp

ಭಾದ್ರಪದ ಶುಕ್ಲ ಪಕ್ಷ ಚತುರ್ದಶಿಯನ್ನು ‘ಅನಂತ ಚತುರ್ದಶಿ’ ಎಂದು ಕರೆಯುತ್ತಾರೆ. ಈ ದಿನವು ಶ್ರೀಗಣೇಶ ಚತುರ್ಥಿ ಆಚರಣೆಯ ಕೊನೆವಯ ದಿನವೂ ಹೌದು. ಈ ದಿನದಂದು ಅನೇಕರು ಅನಂತ ವ್ರತವನ್ನು ಆಚರಿಸುತ್ತಾರೆ. ಈ ವ್ರತದ ಬಗ್ಗೆ ಪ್ರಚಲಿತವಿರುವ ಮಾಹಿತಿಯನ್ನು ತಿಳಿದುಕೊಳ್ಳೋಣ.

ಈ ದಿನದಂದು ಶ್ರೀವಿಷ್ಣು ಅನಂತ ಪದ್ಮನಾಭ ದೇವರಾಗಿ ಭೂಮಿಯಲ್ಲಿ ಅವತಾರ ತಾಳಿದರು ಎಂದು ನಂಬಿಕೆಯಿದೆ. ಶ್ರೀ ಅನಂತ ಪದ್ಮನಾಭ ದೇವರು ಭಕ್ತರ ಎಲ್ಲ ಪ್ರಾರ್ಥನೆ, ಬೇಡಿಕೆಗಳನ್ನು ಈಡೇರಿಸುತ್ತಾರೆ ಮತ್ತು ಸುಖ, ಆರೋಗ್ಯ, ಸಂಪತ್ತನ್ನು ಪ್ರದಾನಿಸುತ್ತಾರೆ ಎಂದು ನಂಬಿಕೆಯಿದೆ.

ಅನಂತ ವ್ರತದ ಬಗ್ಗೆ ಒಂದು ಕಥೆಯನ್ನು ನೋಡೋಣ
ಕೌಂಡಿಲ್ಯ ಮುನಿಯು ವಿವಾಹದ ನಂತರ ಸಪತ್ನೀಕನಾಗಿ ಮನೆಯಿಂದ ಹೊರಟನು. ದಾರಿಯಲ್ಲಿ ನದಿಯ ತೀರದಲ್ಲಿ ಅವರು ನಿತ್ಯ ಕರ್ಮಗಳಿಗೆ ನಿಂತಾಗ, ಅವರ ಪತ್ನಿಯು ಕೆಲವು ಮಹಿಳೆಯರನ್ನು ಒಂದು ವ್ರತವನ್ನು ಆಚರಿಸುತ್ತಿರುವುದನ್ನು ನೋಡಿದರು. ಆ ಮಹಿಳೆಯರನ್ನು ಕೇಳಿದಾಗ ‘ನಾವು ಅನಂತ ವ್ರತವನ್ನು ಆಚರಿಸುತ್ತಿದ್ದೇವೆ’ ಎಂದೂ, ಆ ವ್ರತದಿಂದ ಆಗುವ ಲಾಭಗಳೇನು ಎಂದೂ ತಿಳಿಸಿದರು.

ಇದರಿಂದ ಪ್ರಭಾವಿತರಾದ ಕೌಂಡಿಲ್ಯ ಮುನಿಯ ಪತ್ನಿಯೂ ಕೂಡ ಶೇಷಶಯನನಾದ ಶ್ರೀ ವಿಷ್ಣುವನ್ನು ಪ್ರಸನ್ನಗೊಳಿಸಲು ಅನಂತ ವ್ರತವನ್ನು ಆಚರಿಸತೊಡಗಿದಳು. ಇದರಿಂದಾಗಿ ಕೌಂಡಿಲ್ಯ ಮುನಿಯ ಧನ ಸಂಪತ್ತು ವೃದ್ಧಿಯಾಯಿತು. ಅನೇಕ ವರ್ಷಗಳ ನಂತರ ಒಂದು ದಿನ ಕೌಂಡಿಲ್ಯ ಮುನಿಯು ತನ್ನ ಪತ್ನಿಯ ಕೈಯಲ್ಲಿರುವ ಅನಂತ ವ್ರತದ ದಾರವನ್ನು ನೋಡಿ ಅದೇನೆಂದು ವಿಚಾರಿಸಿದನು.

ಪತ್ನಿಯು ‘ಇದು ಅನಂತ ವ್ರತದ ದಾರ, ಈ ವ್ರತದಿಂದ ನಮಗೆ ದೇವರು ಸುಖ ಸಂಪತ್ತನ್ನು ಕರುಣಿಸಿದ್ದಾನೆ’ ಎಂದು ಹೇಳಿದಳು. ಇದನ್ನು ಕೇಳಿ ಕೌಂಡಿಲ್ಯ ಮುನಿಯು ಕೋಪಗೊಂಡು ‘ಈ ಸುಖ ಸಂಪತ್ತು ನನ್ನ ಪಾಂಡಿತ್ಯದಿಂದ ನಾನು ಸಂಪಾದಿಸಿದ್ದೇನೆ’ ಎಂದು ಹೇಳಿ, ಪತ್ನಿಯ ಕೈಯಲ್ಲಿರುವ ದಾರವನ್ನು ಕಿತ್ತೆಸೆದನು.
ಕ್ರಮೇಣ ಅವರಲ್ಲಿರುವ ಸಂಪತ್ತು ಕ್ಷೀಣಿಸತೊಡಗಿತು. ಮುಂದೊಂದು ದಿನ ಎಲ್ಲವನ್ನೂ ಕಳೆದುಕೊಂಡ ಕೌಂಡಿಲ್ಯ ಮುನಿಗೆ ತನ್ನ ತಪ್ಪಿನ ಅರಿವಾಯಿತು. ಅಖಂಡ ತಪಸ್ಸನ್ನು ಆಚರಿಸಿ ಶ್ರೀ ವಿಷ್ಣುವನ್ನು ಪ್ರಸನ್ನಗೊಳಿಸಿದನು. ಶ್ರೀ ವಿಷ್ಣು ಕೌಂಡಿಲ್ಯ ಮುನಿಗೆ ದರ್ಶನವನ್ನಿತ್ತು, 14 ವರ್ಷಗಳ ಕಾಲ ಅನಂತ ವ್ರತವನ್ನು ಆಚರಿಸಿದರೆ, ಹೋದ ಸುಖ ಸಂಪತ್ತು ಪುನಃ ಗಳಿಸುವುದಾಗಿ ವರವನ್ನು ನೀಡಿದರು.

ಅನಂತ ವ್ರತದ ಬಗ್ಗೆ ಇನ್ನೊಂದು ಕಥೆಯನ್ನು ನೋಡೋಣ
ಪಾಂಡವರು ಕೌರವರ ಕೈಯಲ್ಲಿ ರಾಜ್ಯವನ್ನು ಸೋತು 14 ವರ್ಷಗಳ ಕಾಲ ವನವಾಸವನ್ನು ಅನುಭವಿಸಬೇಕಾಯಿತು. ಈ ಸಮಯದಲ್ಲಿ ಶ್ರೀ ಕೃಷ್ಣನು ಪಾಂಡವರಿಂದ ಅನಂತ ವ್ರತವನ್ನು ಆಚರಿಸಿದನು, ಇದರ ಫಲವಾಗಿ ಅವರಿಗೆ ರಾಜ್ಯ ಭಾಗ್ಯ ಮರಳಿ ದೊರೆಯಿತು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ.

ಅನೇಕರು ಅನಂತ ವ್ರತವನ್ನು 14 ವರ್ಷಗಳ ಕಾಲ ಆಚರಿಸುತ್ತಾರೆ. ಕೆಲವರು ಪರಂಪರಾಗತವಾಗಿ ಅನಂತ ವ್ರತವನ್ನು ಆಚರಿಸುತ್ತಾರೆ. ಇನ್ನು ಕೆಲವರು ಶಕ್ತಿಗನುಸಾರ ಆಚರಿಸುತ್ತಾರೆ. ನಿಷ್ಕಲ್ಮಶ ಮನಸ್ಸಿನಿಂದ, ಭಕ್ತಿಯಿಂದ, ಭಾವದಿಂದ ಅನಂತ ಚತುರ್ದಶಿ ವ್ರತವನ್ನು ಆಚರಿಸಿದವರಿಗೆ ಅನಂತ ದೇವರು ಒಲಿದು ಆರೋಗ್ಯ, ಆಯಸ್ಸು, ಸುಖ, ಸಂಪತ್ತು ಪ್ರದಾನಿಸುತ್ತಾರೆ.

Tags: Ananta ChaturthiLord Sri Hariಅನಂತ ಚತುರ್ದಶಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಮೆಗ್ಗಾನ್: ಇದ್ದರೂ ದೊರೆಯದ ಸೌಲಭ್ಯ, ಲಾಭ ಪಡೆಯುತ್ತಿವೆ ಖಾಸಗಿ ಲ್ಯಾಬ್‌ಗಳು

Next Post

ದೇವ ಕಾರ್ಯ ಫಲಪ್ರದವಾಗಲು ಪಿತೃ ಕಾರ್ಯ ಮಾಡಲೇಬೇಕು

kalpa News

kalpa News

Next Post

ದೇವ ಕಾರ್ಯ ಫಲಪ್ರದವಾಗಲು ಪಿತೃ ಕಾರ್ಯ ಮಾಡಲೇಬೇಕು

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL