ನಾಗ್ಪುರ: ದೇಶ ವಿದೇಶಗಳಲ್ಲಿ ತೀವ್ರ ಕುತೂಹಲ ಕೆರಳಿಸಿ, ಪರ ವಿರೋಧ ಚರ್ಚೆಯನ್ನು ಹುಟ್ಟು ಹಾಕಿರುವ ಆರ್‌ಎಸ್‌ಎಸ್ ಕಾರ್ಯಕ್ರಮ ಇಂದು ನಡೆಯಲಿದ್ದು, ಇದರಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪಾಲ್ಗೊಳ್ಳಲಿದ್ದಾರೆ.
Former President of India Dr.Pranab Mukherjee arrives in Nagpur. He is the chief guest at a Rashtriya Swayamsevak Sangh(RSS) program tomorrow pic.twitter.com/ueAqLyFHj8
— ANI (@ANI) June 6, 2018
ಸಂಘ ಪರಿವಾರದ ಕೇಂದ್ರ ಶಾಖೆಯಲ್ಲಿ ಇಂದು ಸಂಘ್ ಶಿಕ್ಷಾ ವರ್ಗ ನಡೆಯಲಿದ್ದು, ಇದಕ್ಕೆ ಮುಖ್ಯಅತಿಥಿಯಾಗಿ ಆಹ್ವಾನಿತರಾಗಿರುವ ಪ್ರಣವ್ ದಾ, ರಾತ್ರಿ ನಾಗ್ಪುರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಆರ್‌ಎಸ್‌ಎಸ್ ಪ್ರಮುಖರು ಮುಖರ್ಜಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
#WATCH RSS members welcome Former President of India Dr. Pranab Mukherjee on his arrival at Nagpur airport. He is the chief guest at a Rashtriya Swayamsevak Sangh (RSS) program tomorrow (Earlier visuals) pic.twitter.com/vmLg23M7ni
— ANI (@ANI) June 6, 2018
ಸೈದ್ದಾಂತಿಕವಾಗಿ ವಿಭಿನ್ನತೆ ಹೊಂದಿರುವ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾಗಿರುವ ಪ್ರಣವ್ ಪಾಲ್ಗೊಳ್ಳುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಪ್ರಣವ್ ಅವರಿಗೆ ಸಾಕಷ್ಟು ಒತ್ತಡ ಹೇರುವ ತಂತ್ರಗಳನ್ನು ಕಾಂಗ್ರೆಸ್ ಮಾಡಿದೆ. ಜಾತ್ಯಾತೀತತೆಯ ಕಾರಣಗಳಿಂದಾಗಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ನಾಯಕರು ಪ್ರಣಬ್ ಮುಖರ್ಜಿ ಅವರಿಗೆ ಮನವಿ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖರ್ಜಿ ತಾವು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ವ್ಯಕ್ತವಾದ ಆಕ್ಷೇಪಕ್ಕೆ ನಾಗ್ಪುರದಲ್ಲೇ ಉತ್ತರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಕಾರ್ಯಕ್ರಮ ಕುತೂಹಲ ಮೂಡಿಸಿದೆ.
ಇತಿಹಾಸವನ್ನೊಮ್ಮೆ ನೋಡಿದರೆ ಮಹಾತ್ಮ ಗಾಂಧೀಜಿ, ಮಾಜಿ ರಾಷ್ಟ್ರಪತಿ ಝಾಕಿರ್ ಹುಸೇನ್, ಹೋರಾಟಗಾರ ಜಯಪ್ರಕಾಶ್ ನಾರಾಯಣ್, ಭಾರತೀಯ ಸೇನೆಯ ಕಮಾಂಡರ್ ಇನ್ ಚೀಫ್ ಕೆ.ಎಂ. ಕಾರಿಯಪ್ಪ ಅವರುಗಳೂ ಸಹ ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
Discussion about this post