ಕಲ್ಪ ಮೀಡಿಯಾ ಹೌಸ್ | ಟೋಕಿಯೋ |
ವರ್ಷದ ಮೊದಲ ದಿನವಾದ ನಿನ್ನೆ ಜಪಾನ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನದ Earthquake ತೀವ್ರತೆ ಇತ್ತು. ಜಪಾನ್ ನ ಈಶಾನ್ಯ ಭಾಗದ ನನಾವೋ ಭೂ ಕಂಪನದ ಕೇಂದ್ರ ಬಿಂದು ಎಂದು ವರದಿಯಾಗಿದೆ.
ಹೊಸ ವರ್ಷದ ಮೊದಲ ದಿನವೇ ಜಪಾನ್‌ನಲ್ಲಿ ಸಂಭವಿಸಿದ ಪ್ರಾಕೃತಿಕ ಆಘಾತದಿಂದ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದು, 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ. ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಮೊದಲ ದಿನವೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
Also read: ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?
155 ಬಾರಿ ಕಂಪನ
ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಕಂಪನ ಸಂಭವಿಸಿದ್ದು, 155 ಬಾರಿ ಭೂಮಿ ಕಂಪಿಸಿದೆ. ಮೊದಲ ಆರು ಕಂಪನಗಳು ಪ್ರಬಲವಾಗಿದ್ದು, ಈ ಕಂಪನಗಳು ರಿಕ್ಟರ್ ಮಾಪಕದಲ್ಲಿ 6.2 ರಿಂದ 6.7ರವರೆಗೂ ದಾಖಲಾಗಿವೆ. ಬಳಿಕ ಕನಿಷ್ಠ 3 ರಂತೆ 140ಕ್ಕೂ ಅಧಿಕ ಕಂಪನಗಳು ಸಂಭವಿಸಿವೆ ಎಂದು ಭೂಕಂಪನ ಮಾಪನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post