ಕಲ್ಪ ಮೀಡಿಯಾ ಹೌಸ್ | ಟೋಕಿಯೋ |
ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ Fumio Kishida ಅವರು ಪಶ್ಚಿಮ ಜಪಾನ್‌ನ ವಕಯಾಮಾದಲ್ಲಿ ಭಾಷಣ ಮಾಡುತ್ತಿದ್ದ ಸ್ಥಳದ ಸಮೀದಲ್ಲೇ ಸ್ಫೋಟ ಸಂಭವಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ ಓರ್ವನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಪ್ರಧಾನಿಯೆಡೆಗೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದೆ ಎನ್ನಲಾಗಿದ್ದು, ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡಿದೆ. ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Also read: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post