ಕಲ್ಪ ಮೀಡಿಯಾ ಹೌಸ್
ಟೋಕಿಯೊ: ಭಾರತದ ಒಲಂಪಿಕ್ಸ್ ಇತಿಹಾಸದಲ್ಲಿ ಇದೇ ಮೊಟ್ಟಮೊದಲ ಬಾರಿಗೆ ಚಿನ್ನದ ಪದಕ ಸಂದಿದ್ದು, ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ವಿಶ್ವಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಟೋಕಿಯೊನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಹರಿಯಾಣದ ನೀರಜ್ ಚೋಪ್ರಾ ಜಾವಲಿನ್ ಎಸೆತದಲ್ಲಿ ವಿಶ್ವದ ಘಟಾನುಘಟಿಗಳನ್ನು ಹಿಂದಿಕ್ಕಿ ಚಿನ್ನದ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆ ಮೂಲಕ ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post