ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನ.8ರ ನಾಳೆ ಈ ವರ್ಷದ ಕೊನೆಯ ಚಂದ್ರ ಗ್ರಹಣ ಸಂಭವಿಸಲಿದ್ದು, ದೇಶದ ಪ್ರಮುಖ ಸ್ಥಳಗಳಲ್ಲಿ ಇದು ಸಂಪೂರ್ಣವಾಗಿ ಗೋಚರಿಸಲಿದೆ.
ಮಧ್ಯಾಹ್ನ 2.39ಕ್ಕೆ ಗ್ರಹಣ ಸ್ಪರ್ಶಿಸಲಿದ್ದು, ಮಧ್ಯಾಹ್ನ 4.29ಕ್ಕೆ ಮಧ್ಯ ಸ್ಥಿತಿಗೆ ತಲುಪಲಿದೆ. ಸಂಜೆ 6.19ಕ್ಕೆ ಮೋಕ್ಷವಾಗಲಿದೆ. ಚಂದ್ರೋದಯ ಸಂಜೆ 5.59ಕ್ಕೆ ಆಗಲಿದ್ದು, ಆ ನಂತರ ಕಾಣಿಸುತ್ತದೆ. ಆದರೆ ಮೋಕ್ಷ ಕಾಲ ಸಂಜೆ 6.19ಕ್ಕೆ ಇರುವುದರಿಂದ 20 ನಿಮಿಷದಲ್ಲಿ ಚಂದ್ರ ಗ್ರಹಣದ ದರ್ಶನ ಸಹಿತ ಇಡೀ ಗ್ರಹಣ ಮುಗಿದು ಹೋಗುತ್ತದೆ. ಇದು ಕಾರ್ತಿಕ ಹುಣ್ಣಿಮೆ ಗ್ರಹಣವಾಗಿದೆ.

ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ಮೈಸೂರಿನ ಚಾಮುಂಡಿ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ನಿಷೇಧವಿರಲಿದೆ.

ನಾಳೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರವರೆಗೆ ದರ್ಶನಕ್ಕೆ ನಿರ್ಬಂಧವಿರಲಿದೆ. ನಂತರ ಸಂಜೆ 7.30ರಿಂದ ರಾತ್ರಿ 9ರವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಬೆಳಗ್ಗೆ 9.30ರ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರವೇಶ ನಿಷೇಧ ಹೇರಿದ್ದು ರಾತ್ರಿ 8 ಗಂಟೆಗೆ ಕಟೀಲು ದೇಗುಲದಲ್ಲಿ ಪೂಜೆ, ಅನ್ನಪ್ರಸಾದ ಇರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post