ತುಮಕೂರು: ಅಭಿನವ ಬಸವಣ್ಣ, ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದು, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದ್ದೆವೆ. ಅಲ್ಲದೆ, ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

















