ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಈ ಸಮಸ್ಯೆ ಬಗೆಹರಿಸುವಂತೆ ಸಂಚಾರ ಸರ್ಕಲ್ ಇನ್ಸ್’ಪೆಕ್ಟರ್ ಸಿದ್ಧನಗೌಡರಿಗೆ ಇಂದು ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಮನವಿ ಸಲ್ಲಿಸಲಾಯಿತು.
Also Read: ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ: ಕೆ.ಎಸ್. ಈಶ್ವರಪ್ಪ ಕಟಕಿ
ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಎದುರಿನ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ 5 ರಿಂದ 11 ಗಂಟೆಯವರೆಗೆ ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ತರಕಾರಿ, ಹೂವು, ಹಣ್ಣು, ಮೊಬೈಲ್ ಕ್ಯಾಂಟೀನ್ ಇವು ರಸ್ತೆಯ ಇಕ್ಕೆಲಗಳಲ್ಲಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಬರುವ ವಾಹನಗಳು ಪ್ರತಿ ಗಂಟೆಗೊಮ್ಮೆ 10 -15 ನಿಮಿಷಗಳ ಕಾಲ ಟ್ರಾಫಿಕ್ ಜಾಮ್ ಆಗಿ ಸಾರ್ವಜನಿಕರಿಗೆ ಮತ್ತು ಶಾಲಾ ವಾಹನಗಳಿಗೆ, ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ದೂರಿದರು.
Also Read: ನಿಯಮಾವಳಿಗೆ ಸ್ಥಳೀಯರು ಒಪ್ಪಿದರೆ ಹೊಸನಗರ ಒಳಗೆ ಹೆದ್ದಾರಿ ನಿರ್ಮಾಣಕ್ಕೆ ಚಿಂತನೆ: ಶಾಸಕ ಹಾಲಪ್ಪ
ಈ ಕೂಡಲೇ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶರತ್, ವಿನೋದ್, ಪ್ರಕಾಶ್, ಆನಂದ್, ಎಸ್.ಎಲ್. ಧನಂಜಯ್, ವಿಜಯಕುಮಾರ್ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post