ಕಲ್ಪ ಮೀಡಿಯಾ ಹೌಸ್ | ತುಮಕೂರು |
ನಾನು ಈವರೆಗೂ ಗೋಮಾಂಸ ತಿಂದಿಲ್ಲ. ತಿನ್ನಬೇಕು ಎನ್ನಿಸಿದರೆ ತಿನ್ನುತ್ತೇನೆ ಎಂದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಜೀವಮಾನದಲ್ಲಿ ಸಗಣಿ ಎತ್ತದೆ, ಗಂಜಲ ಬಾಚದೇ, ಹಸು ಸಾಕಿ ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕಾ ಎಂದು ಪ್ರಶ್ನಿಸಿದರು.
ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರೂ ಇಂತಹ ಧರ್ಮ, ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ. ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮರೆಯಬಾರದು. ಈ ದೇಶ ಒಂದು ಧರ್ಮಕ್ಕೆ ಸೇರಿದ್ದಲ್ಲ, ಎಲ್ಲರಿಗೂ ಸಮಾನ ಅವಕಾಶವಿದೆ. ಭಾರತದಲ್ಲಿರುವ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಅಗತ್ಯ. ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ತಿಳಿಸಿದರು.
Also read: ಏಕಕಾಲಕ್ಕೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news











Discussion about this post