ಕಲ್ಪ ಮೀಡಿಯಾ ಹೌಸ್ | ತುಮಕೂರು |
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಬಂಧಿತ ಯುವಕನನ್ನು ವಿನಯ್(21) ಎಂದು ಗುರುತಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿ ಹಾಗೂ ಆರೋಪಿ ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ಈತ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 ತಿಂಗಳ ಗರ್ಭಿಣಿ ಎಂಬುವುದು ಗೊತ್ತಾಯಿತು. ಆಕೆಯನ್ನು ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post