No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ಶ್ರೀತ್ಯಾಗರಾಜ, ಪುರಂದರದಾಸರ ಆರಾಧನೋತ್ಸವ: ಜ.12ರಿಂದ ಮೂರು ದಿನ ಗಾನಾರಾಧನೆ

ಶಿವಮೊಗ್ಗದ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಅನುಗ್ರಹ ಸಂಗೀತ ಮಹಾವಿದ್ಯಾಲಯ ಆಯೋಜನೆ

kalpa News by kalpa News
January 10, 2023
in ತುಮಕೂರು
0
ಶ್ರೀತ್ಯಾಗರಾಜ, ಪುರಂದರದಾಸರ ಆರಾಧನೋತ್ಸವ: ಜ.12ರಿಂದ ಮೂರು ದಿನ ಗಾನಾರಾಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ತುಮಕೂರು |

ನಗರದಲ್ಲಿ ಕಳೆದ 21 ವರ್ಷಗಳಿಂದ ಕರ್ನಾಟಕ ಶಾಸೀಯ ಸಂಗೀತಕ್ಕೆ ಅನನ್ಯ ಕೊಡುಗೆ ನೀಡುತ್ತಿರುವ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಮತ್ತು ಕರ್ನಾಟಕದ ಪ್ರಖ್ಯಾತ ಸಂಗೀತ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಜನವರಿ 12, 13 ಮತ್ತು 14ರಂದು ಶ್ರೀ ತ್ಯಾಗರಾಜರ ಮತ್ತು ಶ್ರೀ ಪುರಂದರದಾಸರ ಆರಾಧನೋತ್ಸವ ಆಯೋಜಿಸಲಾಗಿದೆ.

ನಗರದ ವಿವೇಕಾನಂದ ರಸ್ತೆಯ ಮಾ.ಕಂ. ಕಲ್ಯಾಣ ಮಂದಿರದಲ್ಲಿ 3 ದಿನಗಳ ಕಾಲ ಗೋಷ್ಠಿಗಾಯನ, ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ- ವ್ಯಾಖ್ಯಾನ, ಶ್ರೀ ಪುರಂದರದಾಸರ ನವರತ್ನ ಮಾಲಿಕೆ ಗೋಷ್ಠಿ, ವಿದ್ವಾಂಸರಿಂದ ಸಂಗೀತ ಕಛೇರಿಗಳು ಆಯೋಜನೆಗೊಂಡಿವೆ.
ಜ. 12ರ ಸಂಜೆ 5:30ಕ್ಕೆ ವಿದ್ಯಾಲಯದ ವಿದ್ಯಾರ್ಥಿಗಳು ದೇವರನಾಮ ಹಾಡುವ ಮೂಲಕ ಸಂಗೀತ ಆರಾಧನೋತ್ಸವಕ್ಕೆ ಚಾಲನೆ ನೀಡಲಿರುವುದು ಬಹು ವಿಶೇಷ. ಸಂಜೆ ೬ಕ್ಕೆ ಹಿರಿಯ ವಿದ್ಯಾರ್ಥಿಗಳಾದ ಮೀನಾ ಕಾಂತ, ಪ್ರಭಾ ವೇಣುಗೋಪಾಲ, ಸಂಧ್ಯಾ ದಿವೇಕರ್, ಕುಸುಮಾ ಕರುಣಾಕರ ಮತ್ತು ಶಾಂತಲಾ ಅವರಿಂದ ಶಾಸ್ತ್ರೀಯ ಸಂಗೀತ ಗಾಯನವಿದೆ.

ಸಂಜೆ 6:30ಕ್ಕೆ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಸದ್ಗುರು ಶ್ರೀ ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಆಯೋಜನೆಗೊಂಡಿದೆ. ಹಿರಿಯ ಗಾಯಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸ್ಥಳೀಯ ಕಲಾವಿದರು ಏಕ ಕಂಠದಲ್ಲಿ ಪಂಚರತ್ನ ಕೃತಿಗಳನ್ನು ಹಾಡಲಿದ್ದಾರೆ. ಲೇಖಕ ಶಿವಮೊಗ್ಗ ರಘುರಾಮ ಪಂಚರತ್ನ ಕೃತಿಗಳಿಗೆ ವ್ಯಾಖ್ಯಾನ ನೀಡಲಿದ್ದಾರೆ.
ಮಾತೆಯರ ಗಾಯನ:
ಜ. 13ರಂದು ಸಂಜೆ 5:30ಕ್ಕೆ ವಿದ್ಯಾಲಯದ ಕಿರಿಯ ವಿದ್ಯಾರ್ಥಿಗಳಿಂದ ದಾಸರ ಕೃತಿಗಳ ಗೋಷ್ಠಿಗಾಯನವಿದೆ. ಸಂಜೆ 6ಕ್ಕೆ ಶ್ರೀ ಅನುಗ್ರಹ ಸಂಗೀತ ಮಹಿಳಾ ಸಂಘದ ಕಲಾವಿದರಾದ ಶೈಲಾ ಕುಮಾರಿ, ಟಿ.ಎಲ್. ಪದ್ಮಜಾ, ಸಪ್ನಾ, ಪದ್ಮಜಾ ಅರುಣ್ ಮತ್ತು ಮಮತಾ ದೇವರನಾಮ ಗಾಯನ ಪ್ರಸ್ತುತಪಡಿಸಲಿದ್ದಾರೆ. ಸಂಜೆ 6:30ಕ್ಕೆ ಹಿರಿಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವಿದ್ದು, ತನ್ಯಾ, ಕೋಮಲ, ಪ್ರೇರಣಾ, ಸಮನ್ವಿತಾ ಮತ್ತು ತನಿಷ್ಕಾ ಅವರು ತಮ್ಮ ಪ್ರೌಢಿಮೆ ಪ್ರದರ್ಶಿಸಲಿದ್ದಾರೆ. ನಂತರ ಬೆಂಗಳೂರಿನ ವಿದ್ವಾನ್ ಸುಬ್ಬುಕೃಷ್ಣ ಅವರಿಂದ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ.

ಜ.14ರ ಶನಿವಾರ ಬೆಳಗ್ಗೆ 8.30ಕ್ಕೆ ಅನುಗ್ರಹ ಸಂಗೀತ ಮಹಾವಿದ್ಯಾಲಯದ ಕಿರಿಯ ವಿದ್ಯಾರ್ಥಿಗಳಿಂದ ಗಾಯನವಿದೆ. 10ಕ್ಕೆ ಶ್ರೀ ಪುರಂದರದಾಸರ ನವರತ್ನ ಮಾಲಿಕೆ ಗೋಷ್ಠಿ ಗಾಯನವಿದ್ದು, ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು, ಸಂಗೀತ ಶಿಕ್ಷಕರು ಭಾಗವಹಿಸಲಿದ್ದಾರೆ.
ದೇವರನಾಮ ಶಿಬಿರದ ಸಮಾರೋಪ:
ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ತುಮಕೂರಿನಲ್ಲಿ 15 ದಿನಗಳ ಕಾಲ ಮಾತೆಯರಿಗೆ ಹಮ್ಮಿಕೊಂಡಿದ್ದ `ದೇವರನಾಮ ಉಚಿತ ಕಲಿಕಾ ತರಬೇತಿ ಶಿಬಿರ’ದ ಸಮಾರೋಪ ಸಮಾರಂಭ ಶನಿವಾರ ಬೆಳಗ್ಗೆ ೧೧ಕ್ಕೆ ನಡೆಯಲಿದೆ. ಶಿಬಿರದಲ್ಲಿ ಭಾಗವಹಿಸಿದ್ದ 100ಕ್ಕೂ ಹೆಚ್ಚು ಮಾತೆಯರು ದಾಸರ 12 ಕೃತಿಗಳನ್ನು ಏಕಕಂಠದಲ್ಲಿ ಹಾಡಿ ರಂಜಿಸಲಿದ್ದಾರೆ. ಶ್ರೀ ಉತ್ತರಾದಿ ಮಠದ ವಿದ್ವಾಂಸ ಆನಂದತೀರ್ಥ ಗುಮಾಸ್ತೆ ಅವರು ದಾಸರ ಕೃತಿಗಳಿಗೆ ವ್ಯಾಖ್ಯಾನ ನೀಡಲಿದ್ದಾರೆ. ವಿವರಗಳಿಗೆ 88612 13567 ಸಂಪರ್ಕಿಸಬಹುದು ಎಂದು ವಿದ್ವಾನ್ ಶ್ರೀಕಂಠಭಟ್ ತಿಳಿಸಿದ್ದಾರೆ.
ವಿದ್ಯಾಲಯದ ಸಾಧನೆ:
ಕಳೆದ 21 ವಸಂತಗಳಿಂದ ಕರ್ನಾಟಕ ಶಾಸೀಯ ಸಂಗೀತ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ನೀಡುತ್ತಾ, ಬೆಂಗಳೂರು ಮತ್ತು ತುಮಕೂರಿನಲ್ಲಿ ಶಾಖೆಗಳನ್ನು ಹೊಂದಿರುವ `ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ’ ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಕಲಾಭಿರುಚಿ ಮೂಡಿಸಿದ ಕೀರ್ತಿಗೆ ಭಾಜನವಾಗಿದೆ. ನೂರಾರು ಮಾತೆಯರಿಗೆ ಪ್ರತಿವರ್ಷ 15 ದಿನಗಳ ಕಾಲ ಬೆಂಗಳೂರು ಮತ್ತು ತುಮಕೂರಿನಲ್ಲಿ `ಉಚಿತ ದೇವರನಾಮ ಶಿಬಿರ’ದ ಮೂಲಕ ಗಾಯನ ಸಂಸ್ಕೃತಿ ಪರಿಚಯಿಸಿದೆ. ಶ್ರೀ ತ್ಯಾಗರಾಜರ ಮತ್ತು ಪುರಂದರ ದಾಸರ ಆರಾಧನೆ ಸಂದರ್ಭ ವಿವಿಧ ರಂಗದ ಗಣ್ಯರು, ಕಲಾ ಪೋಷಕರು ಮತ್ತು ವಿದ್ವಾಂಸರನ್ನು ಗೌರವಿಸಿದ ಕೀರ್ತಿಗೆ ಪಾತ್ರವಾಗಿದೆ. ನಾಡಿನ ಹಿರಿಯ ವಿದ್ವಾಂಸ, ಶಿವಮೊಗ್ಗ ಮೂಲಕ ಜೆ.ಎಸ್. ಶ್ರೀಕಂಠ ಭಟ್ ವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವುದು ಸುಕೃತವೇ ಸರಿ.

ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaTumkurತುಮಕೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಿನನಿತ್ಯದ ವಹಿವಾಟಿಗೆ ಬ್ಯಾಂಕ್ ಶಾಖೆ ಅತ್ಯವಶ್ಯ: ಕುಲಪತಿ ಡಾ. ಜಗದೀಶ್

Next Post

ರುದ್ರಾಕ್ಷಪುರಂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

kalpa News

kalpa News

Next Post
ರುದ್ರಾಕ್ಷಪುರಂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ರುದ್ರಾಕ್ಷಪುರಂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL