ಕಲ್ಪ ಮೀಡಿಯಾ ಹೌಸ್ | ತುಮಕೂರು |
ರಾಜ್ಯದಲ್ಲಿ ಕಾಡುತ್ತಿರುವ ವಿದ್ಯುತ್ ಕಣ್ಣಾಮುಚ್ಚಾಲೆಗೆ ಪರಿಹಾರ ಹುಡುಕದೇ ಇದ್ದರೆ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ BSYadiyurappa ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿದ್ಯುತ್ ಅಭಾವ ,ಕುಡಿಯುವ ನೀರಿನ ಸಮಸ್ಯೆ, ದುಡಿಯುವ ಕೈಗಳಿಗೆ ಕೆಲಸ ಇಲ್ಲ. ರಾಜ್ಯದಲ್ಲಿ ಸರ್ಕಾರ ಬದಕಿದ್ದು ಸತ್ತಂತಿದೆ ಎಂದು ಕಿಡಿ ಕಾರಿದರು.
ತುಮಕೂರು ಕೈಗಾರಿಕೆಯಲ್ಲಿ ಬಹಳಷ್ಟು ಅಭಿವೃದ್ಧಿ ಆಗುತ್ತಿದೆ. ಚೇಂಬರ್ ಆಫ್ ಕಾಮರ್ಸ್ ಮುಖಂಡರು ಜ್ವಲಂತ ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ತುಮಕೂರು ಜಿಲ್ಲೆಯ ಇಬ್ಬರೂ ಸಚಿವರುಗಳು ಸಮಸ್ಯೆ ತಿಳಿದುಕೊಂಡು ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಬೇಕಿತ್ತು. ನಾನೇ ಖುದ್ದಾಗಿ ಬಂದು ಸಮಸ್ಯೆ ಆಲಿಸಿದ್ದೇವೆ. ನಾವು ಬರ ಅಧ್ಯಯನ ಮಾಡ್ತಿವಿ ಅಂದಾಗ ಡಿಕಿಶಿ, ಸಿಎಂ ಹಗುರವಾಗಿ ಮಾತಾಡಿದ್ದಾರೆ ಎಂದರು.
Also read: ಪ್ರಧಾನಿ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಮತ್ತೊಂದು ಕಡೆ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು. ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸಿಎಂ ಹಾಗೂ ಡಿಸಿಎಂಗೆ ನೇರ ಎಚ್ಚರಿಕೆ ನೀಡಿದರು.
ಕೇಂದ್ರ ತಂಡ ಬರ ಅಧ್ಯಯನ ನಡೆಸಿದೆ. ಕೇಂದ್ರ ಪರಿಹಾರ ಕೊಟ್ಟೆ ಕೊಡುತ್ತದೆ. ನಾವು ಅಧಿಕಾರದಲ್ಲಿದ್ದಾಗ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂಭವಿಸಿದೆ. ಕೇಂದ್ರ ಸರ್ಕಾರ ಅನುದಾನ ಕೊಡಲಿ ಅಂತಾ ಕಾಯುತ್ತಾ ಇರಲಿಲ್ಲ. ತP್ಷÀಣವೇ ಅನುದಾನ ಕೊಟ್ಟು, ಆನಂತರ ಕೇಂದ್ರ ಕೊಟ್ಟಾಗ ಸರಿದೂಗಿಸಿಕೊಳ್ಳುತ್ತಿದ್ದೆವು ಎಂದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post