ಕಲ್ಪ ಮೀಡಿಯಾ ಹೌಸ್ | ತುಮಕೂರು |
ಮಕ್ಕಳನ್ನು ಕಿಡ್ನಾಪ್ ಮಾಡಿ ಮಾರಾಟ #Child Kidnap and Sale ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಜಿಲ್ಲಾ ಪೊಲೀಸರು 9 ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಜಿಲ್ಲೆಯ ಗುಬ್ಬಿಯಲ್ಲಿ 11 ತಿಂಗಳ ಮಗುವೊಂದು ಕಾಣೆಯಾಗಿತ್ತು. ಇದನ್ನು ಕಿಡ್ನಾಪ್ ಪ್ರಕರಣವಾಗಿ ಪರಿಗಣಿಸಿ ತನಿಖೆ ಆರಂಭಿಸಿದ ಪೊಲೀಸರು ಜಾಲವನ್ನು ಬೆಳಕಿಗೆ ಎಳೆದಿದ್ದಾರೆ.
ತನಿಖೆ ನಡೆಸಿದ ಪೊಲೀಸರು ಐದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಒಂದು ಮಗು ಸಾವನ್ನಪ್ಪಿದ್ದು, 3 ಮಕ್ಕಳಿಗಾಗಿ ಶೋಧ ಕಾರ್ಯ ನಡೆದಿದೆ.
Also read: ಶಿವಮೊಗ್ಗ | ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ದ್ವಿತೀಯ ಸ್ಥಾನ
ಪ್ರಮುಖವಾಗಿ ಗರ್ಭ ಧರಿಸಿದ ಅವಿವಾಹಿತ ಮಹಿಳೆಯರು ಹಾಗೂ ಅನೈತಿಕ ಗರ್ಭ ಧರಿಸಿದವರಿಂದ ಮಕ್ಕಳನ್ನು ಖರೀದಿ ಮಾಡಿ 2-3 ಲಕ್ಷ ರೂ.ಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.
ಪ್ರಕರಣ ಸಂಬಂಧ ಮೆಹಬೂಬ್ ಪಾಷಾ, ಮಹೇಶ್, ಕೆ.ಎನ್. ರಾಮಕೃಷ್ಣ, ಹನುಮಂತರಾಜು, ಮಬಾರಕ್ ಪಾಷಾ, ಪೂರ್ಣಿಮಾ ಹಾಗೂ ಸೌಜನ್ಯ ಎನ್ನುವವರನ್ನು ಬಂಧಿಸಲಾಗಿದೆ.
ಬಂಧಿತ ಮೆಹಬೂಬ್ ಪಾಷಾನ ಹುಳಿಯಾರಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳು ಕೊಳ್ಳುವವರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು ಅವರಿಗೆ ಹುಟ್ಟಿನ ಮಕ್ಕಳೆಂದು ಪ್ರಮಾಣಪತ್ರ ನೀಡಲಾಗುತ್ತಿತ್ತು ಎಂದು ವರದಿಯಾಗಿದೆ.
ಇನ್ನು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದರ ಹಿಂದೆ ದೊಡ್ಡ ಜಾಲವೇ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post