ಕಲ್ಪ ಮೀಡಿಯಾ ಹೌಸ್ | ತುಮಕೂರು |
ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ. ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕಿ ಸುನಂದ ಕರೆ ನೀಡಿದರು.
ಇಂದು ಜಿಲ್ಲೆಯ ಹೆಬ್ಬೂರು ಹೋಬಳಿಯ ಚಿಕ್ಕಯ್ಯನಪಾಳ್ಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಗುರುವಂದನಾ ಹಾಗೂ ಗುರು ಶಿಷ್ಯರ ಸಮಾಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also read: ಕಾರ್ಕಳ | ಕ್ರಿಯೇಟಿವ್ ಕಾಲೇಜಿನಿಂದ 7 ದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ಮತ್ತೊರ್ವ ನಿವೃತ್ತ ಶಿಕ್ಷಕರಾದ ಕಮಲಾಮ್ಮ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಖೇದದ ಸಂಗತಿಯಾದರೇ, ಇನ್ನೊಂದೆಡೆ ಕೆಲ ವಿದ್ಯಾರ್ಥಿಗಳು ಶಿಕ್ಷಣ ನೀಡಿದ ಗುರುಗಳನ್ನು ನೆನೆದು ಶಿಕ್ಷಕ ಗುರುವಂದನೆಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶಿಕ್ಷಕರ ಗೌರವವನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post