ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಹುಬ್ಬಳ್ಳಿಯಿಂದ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

















