ಕಲ್ಪ ಮೀಡಿಯಾ ಹೌಸ್ | ತುಮಕೂರು |
ಖಾಸಗಿ ಬಸ್ಸೊಂದು ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಚಿಕ್ಕನ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಇಂದು ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Also read: ತಾವು ಆಡದೇ ಇರುವ ಮಾತುಗಳಿಗೆ ಸುಳ್ಳು ಆರೋಪ | ಪೇಜಾವರ ಶ್ರೀಗಳು ಹೇಳಿದ್ದು ಯಾರ ವಿರುದ್ಧ?
ಮೃತ ಮಹಿಳೆಯರನ್ನು ಸಿಂಬಾಳಿ ಸಿಂಗ್, ಊರ್ವಿ ಹಾಗೂ ಪ್ರಿಯಾಂಕ ಮೃತ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 20 ಜನ ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆ ಹಾಗೂ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್‌ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post