ಕಲ್ಪ ಮೀಡಿಯಾ ಹೌಸ್ | ತುಮಕೂರು |
ದಟ್ಟ ಮಂಜು ಆವರಿಸಿದ್ದ ಪರಿಣಾಮ ರಸ್ತೆ ಕಾಣದೇ ಭೀಕರ ಅಪಘಾತ #Terrible Accident ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಓಬಳಾಪುರ ಗೇಟ್ ಬಳಿಯಲ್ಲಿ ನಡೆದಿದೆ.
ಮೃತರನ್ನು ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ಮಮ್ತಾಜ್ (38) ಶಾಖೀರ್ ಹುಸೇನ್ (48), ಮಹ್ಮದ್ ಆಸೀಫ್ (12) ಎಂದು ಗುರುತಿಸಲಾಗಿದೆ.
Also read: SRN ಕಾಲೇಜಿನಲ್ಲಿ ಸುಗ್ಗಿ | ಹೇಗಿತ್ತು ಎಳ್ಳು ಬೀರಿದ ವಿದ್ಯಾರ್ಥಿಗಳ ಸಂಭ್ರಮ?
ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್’ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಡಿವೈಎಸ್ ಪಿ ಕೆ.ಆರ್. ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post