ಕಲ್ಪ ಮೀಡಿಯಾ ಹೌಸ್ | ತುಮಕೂರು |
ಜಾತ್ರೆಯಲ್ಲಿ ಊಟ ಸೇವಿಸಿದ ಮೂವರು ಮಹಿಳೆಯರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಬುಳ್ಳಸಂದ್ರದಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ.
ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಗಿದ್ದು, ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.
Also read: ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಯುವಕ | ಎಕ್ಸ್’ರೇ ನೋಡಿ ಬಚ್ಚಿಬಿದ್ದ ವೈದ್ಯರು | ಇಷ್ಟಕ್ಕೂ ಏನೆಲ್ಲಾ ಇತ್ತು?
ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಆಹಾರ ಸಿದ್ಧಪಡಿಸಿ, ಜಾತ್ರೆಗೆ ತಂದಿದ್ದರು. ಮೂರು ಕುಟುಂಬಗಳು ತಯಾರಿಸಿದ ಆಹಾರ ಸೇವಿಸಿದವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post