ಶಿವಮೊಗ್ಗ: ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯನ್ವಯ ಆಗಸ್ಟ್ 20ರ ನಾಳೆ ಹಾಗೂ 21ರ ಬುಧವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
















