ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ.
ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ ಎಂಬ ಇಬ್ಬರು ಮುಸ್ಲಿಂ ಯುವಕರಲ್ಲಿ ಒಬ್ಬನು ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಅನಾವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದನು. ಇನ್ನೊಬ್ಬ ಆರೋಗ್ಯ ಇಲಾಖೆಯ ಹೆಲ್ತ್ ಆಫೀಸರ್ ಎಂದು ಹೇಳಿಕೊಂಡು ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂಬ ಕಾರಣ ನೀಡಿ ಹಣ ವಸೂಲಿ ಮಾಡುತ್ತಿದ್ದನು.
ಹಾರನಹಳ್ಳಿಯ ಬಸ್ ನಿಲ್ದಾಣದ ಆವರಣದಲ್ಲಿ ಸುಳ್ಳು ಹೇಳಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದರು. ಇಲ್ಲಿ ಕರ್ತವ್ಯದಲ್ಲಿದ್ದ ಗೃಹ ರಕ್ಷಕದಳದ ಶ್ರೀನಿವಾಸ್ ಅವರು ಅನುಮಾನಗೊಂಡು ವಿಚಾರಿಸಿದ್ದಾರೆ. ವಿಚಾರ ತಿಳಿದ ಭಜರಂಗದಳದ ಪ್ರಮುಖರ ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಸತ್ಯ ಹೊರಬಿದ್ದಿದ್ದು, ಇಬ್ಬರನ್ನೂ ಬಂಧಿಸಿ ಕುಂಸಿ ಠಾಣೆಗೆ ಒಪ್ಪಿಸಲಾಗಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿರುವ ಭಜರಂಗದಳದ ಸ್ಥಳೀಯ ಪ್ರಮುಖರು, ಸಾರ್ವಜನಿಕರನ್ನು ಇಂತಹ ತುರ್ತು ಪರಿಸ್ಥಿತಿಯಲ್ಲೂ ಸಹ ಸಾರ್ವಜನಿಕರನ್ನು ವಂಚಿಸುತ್ತಿರುವ ಇಂತಹವರಿಗೆ ಕಾನೂನು ರೀತ್ಯಾ ಶಿಕ್ಷಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಮಯದಲ್ಲಿ ಕರ್ತವ್ಯ ಪ್ರಜ್ಞೆ ಮೆರೆದ ಶ್ರೀನಿವಾಸ್ ಅವರಿಗೂ ಮತ್ತು ಭಜರಂಗದಳ ಹಾರನಹಳ್ಳಿ ಘಟಕ ಇವರಿಗೆ ನಮ್ಮ ಸ್ನೇಹ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
(ಮಾಹಿತಿ: ಭಜರಂಗದಳ, ಹಾರನಹಳ್ಳಿ)
Get in Touch With Us info@kalpa.news Whatsapp: 9481252093
Discussion about this post