ಲಕ್ನೋ: ಉತ್ತರಪ್ರದೇಶದ ಲಕ್ನೋನಲ್ಲಿರುವ ಚಾರ್ಬಾಗ್ ನಗರದಲ್ಲಿರುವ ಪ್ರಸಿದ್ಧ ಅಂತರರಾಷ್ಟ್ರೀಯ ಹೋಟೆಲ್ ವಿರಾಟ್‌ನಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ.
ಅಗ್ನಿ ಅನಾಹುತ ಸಂಭವಿಸಿದ ತತಕ್ಷಣವೇ ನಡೆದ ಕಾರ್ಯಾಚರಣೆಯಲ್ಲಿ ಹೋಟೆಲ್ ನಿಂದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಲಕ್ನೋ ಐಜಿ ಎಸ್. ಪಾಂಡೆ ತಿಳಿಸಿದ್ದಾರೆ.
ಆರಂಭದಲ್ಲಿ ಹೋಟೆಲ್ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಕೊಂಡಿದ್ದು, ನಂತರ ಎಲ್ಲಾ ಮಹಡಿಗಳಿಗೂ ವಿಸ್ತರಿಸಿದೆ. ಅಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಹೆಚ್ಚಾಗಿದ್ದರಿಂದ ಅಕ್ಕ ಪಕ್ಕದ ಕಟ್ಟಡಗಳಿಗೂ ಬೆಂಕಿ ತಗುಲಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
#UPDATE: Fire broke out in Charbagh’s SSJ International hotel, in the early morning hours. Police says, ‘Search operation on the first floor is underway. 5 people have been taken to hospital for treatment. Cause of fire yet to be ascertained. Investigation is underway’. pic.twitter.com/f2Z8AKDyMY
— ANI UP (@ANINewsUP) June 19, 2018
ಈ ಕುರಿತಂತೆ ಮಾತನಾಡಿರುವ ಐಜಿ ಎಸ್. ಪಾಂಡೆ, ಈ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
Discussion about this post