ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಎರಡು ಹೊಸ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಎರಡು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
1502 ಸಂಖ್ಯೆಯ ರೋಗಿಯ ಸಂಪರ್ಕ ಹೊಂದಿದ್ದ 28 ವರ್ಷದ ಯುವಕ ಹಾಗೂ ಸಂಖ್ಯೆ 1498 ಸಂಖ್ಯೆಯ ರೋಗಿ ಸಂಪರ್ಕ ಹೊಂದಿದ್ದ 42 ವರ್ಷದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
Get in Touch With Us info@kalpa.news Whatsapp: 9481252093

















