ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಹೊಸ ಕೋವಿಡ್19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ರಾಜಾಸ್ತಾನದಿಂದ ಜಿಲ್ಲೆಗೆ ಆಗಮಿಸಿದ ವ್ಯಕ್ತಿಯೊಬ್ಬನಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಈತ ರೋಗಿ ಸಂಖ್ಯೆ ಪಿ2008 ಆಗಿದ್ದಾನೆ.
ಇನ್ನು, ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲದಿದ್ದರೂ ರೋಗಿ ಸಂಖ್ಯೆ ಪಿ808ರೊಂದಿಗೆ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ 31 ವರ್ಷದ ಪುರುಷನಲ್ಲಿಯೂ ಸಹ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
Get in Touch With Us info@kalpa.news Whatsapp: 9481252093
Discussion about this post