ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಸೋಂಕು ಆತಂಕದ ನಡೆಯುವೆಯೂ ರಾಜ್ಯದ ಗ್ರಾಮ ಪಂಚಾಯ್ತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಎರಡು ಹಂತದಲ್ಲಿ ಮುಹೂರ್ತ ನಿಗದಿ ಮಾಡಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು, ಡಿಸೆಂಬರ್ 22 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು ಡಿಸೆಂಬರ್ 27 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ರಾಜ್ಯದ ಒಟ್ಟು 5762 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಮತಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಡಿಸೆಂಬರ್ 7 ರಂದು ಅಧಿಸೂಚನೆ ಹೊರಡಲಿದ್ದು, ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನಾಮಪತ್ರ ವಾಸಪ್ ಪಡೆಯಲು ಡಿಸೆಂಬರ್ 19 ರಂದು ಕೊನೆಯದಿನವಾಗಿದೆ. ಡಿಸೆಂಬರ್ 30 ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post