ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗಧಿಪಡಿಸಿದ್ದು, ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುರ್ಮಾ ಕರ್ನಾಟಕದಲ್ಲಿ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದರು.
ಏಪ್ರಿಲ್ 26 ರಂದು ಮೊದಲ ಹಂತದ ಹಾಗೂ ಮೇ 7ರಂದು ಎರಡನೆಯ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ.
Also read: ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ
ಮೊದಲ ಹಂತಕ್ಕೆ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಹಿಂಪಡೆಯಲು ಏಪ್ರಿಲ್ 4 ಕೊನೆಯ ದಿನವಾಗಿದೆ. ಮೇ 7ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೆಯ ಹಂತದ ಮತದಾನ ನಡೆಯಲಿದೆ.
ಎಪ್ರಿಲ್ 26ರಂದು ಮೊದಲ ಹಂತದಲ್ಲಿ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.
ಮೇ 7ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀರ್ದ, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮತದಾನ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post