ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ರಾಜಕಾರಣಿಯಲ್ಲ. ಬದಲಾಗಿ ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಖಾದರ್ ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಮಂಗಳೂರಿನಲ್ಲಿ ಗಲಭೆಯೂ ಸಹ ನಡೆದಿದೆ. ಆದರೆ, ಓರ್ವ ಶಾಸಕರಾಗಿ ಇಂತಹ ಹೇಳಿಕೆ ನೀಡಿರುವುದು ಅವರೊಬ್ಬ ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಅದಕ್ಕೆ ಕಾಂಗ್ರೆಸ್ ಪಕ್ಷ ಎಂದು ಹೆಸರಿಡುವ ಬದಲು ಭಯೋತ್ಪಾದಕರ ಪಕ್ಷ ಎಂದು ಹೆಸರಿಟ್ಟರೆ ಸೂಕ್ತ ಎಂದು ಕಟಕಿಯಾಡಿದರು.
Get in Touch With Us info@kalpa.news Whatsapp: 9481252093
















