ಕಲ್ಪ ಮೀಡಿಯಾ ಹೌಸ್ | ಉಡುಪಿ |
ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಸರ್ಕಾರಿ ಶಾಲೆ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದಳು ಎಂದು ದೂರಲಾಗಿತ್ತು.ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿP್ಷÀಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Also read: ಕಾರು ಅಪಘಾತ | ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ಗೆ’ ಗಂಭೀರ ಗಾಯ
ಬಂಧಿತ ಶಿಕ್ಷಕಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಅಲ್ಲದೇ ತನ್ನ ಮನೆಯಲ್ಲಿ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಖಚಿತಗೊಂಡಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಶಿಕ್ಷಕಿ ಹಾಗೂ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post