ಕಲ್ಪ ಮೀಡಿಯಾ ಹೌಸ್ | ಉಡುಪಿ |
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ನಿಟ್ಟೂರು ಬಾಳಿಗ ಫಿಶ್ ನೆಟ್ ಎದುರು ಪ್ರದೇಶದಲ್ಲಿ ಘಟನೆ ನಡೆದಿದ್ದು, ಮೃತರನ್ನು ಹರೇಂದ್ರ ಮರಾಂಡಿ (53) ಎಂದು ಗುರುತಿಸಲಾಗಿದೆ.
ಅಂಬಾಗಿಲು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನ, ರಸ್ತೆ ದಾಟಲು ರಸ್ತೆಯ ಅಂಚಿನಲ್ಲಿ ನಿಂತಿದ್ದ ಹರೇಂದ್ರ ಮರಾಂಡಿಗೆ ಡಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕರೆದು ಹೋಗುತ್ತಿದ್ದ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Also read: ಡಿ.13, 14: ಪಿ.ಜಿ. ಲಕ್ಷ್ಮೀ ನಾರಾಯಣ ಸ್ಮರಣಾರ್ಥ ವಿಶೇಷ ಸಂಗೀತ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post