ಕಲ್ಪ ಮೀಡಿಯಾ ಹೌಸ್ | ಉಡುಪಿ |
ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ #Panchami Puraskara-2025 ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ #Mandya Ramesh ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಎಚ್. ಪಿ. ರವಿರಾಜ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ ರೂಪಾಯಿ)ಯೊಂದಿಗೆ ಪ್ರಶಸ್ತಿ ಪತ್ರ, ಪದಕ ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಮಂಡ್ಯ ರಮೇಶ್ ಪರಿಚಯ
ಮಂಡ್ಯ ರಮೇಶ್ ನಟ, ನಿರ್ದೇಶಕ, ರಂಗಶಿಕ್ಷಕ, ರಂಗ ಸಂಘಟಕ ಹಾಗೂ ಕಿರುತೆರೆ-ಚಲನಚಿತ್ರಗಳ ಹಿರಿಯ ಕಲಾವಿದ. ಮೈಸೂರಿನ ನಟನ ಸಂಸ್ಥೆ ಹಾಗೂ ರಂಗಶಾಲೆಯ ಸ್ಥಾಪಕ. ಹಿರಿಯ ರಂಗಕರ್ಮಿ. ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮತ್ತು ನೀನಾಸಂ ತಿರುಗಾಟದ ಮೊದಲ ಮೂರು ವರ್ಷಗಳ ಕಲಾವಿದ.

Also read: ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ
ಭಾರತದ ಪುಟ್ಟ ಹಳ್ಳಿ – ಮಹಾನಗರಗಳಾದಿಯಾಗಿ ಅಮೇರಿಕಾದ ನ್ಯೂಯಾರ್ಕ್, ಕ್ಯಾಲಿಫೋರ್ನಿಯ, ವಾಷಿಂಗ್ಟನ್ ಡಿ.ಸಿ., ಆಸ್ಟೇಲಿಯಾ, ಜರ್ಮನಿ, ಆಸ್ಟ್ರಿಯಾ, ಲಂಡನ್, ರ‍್ಲೆಂಡ್, ದುಬೈ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್, ಶ್ರೀಲಂಕಾ, ಜಪಾನ್ ಮುಂತಾದ ಅನೇಕ ರಾಷ್ಟ್ರಗಳಲ್ಲಿ ನಾಟಕ ಪ್ರದರ್ಶನ , ಶಿಬಿರಗಳನ್ನು ನಡೆಸಿದ ಅನುಭವ. 2018ರ ನವೆಂಬರ್ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ರಂಗಭೂಮಿ ಮತ್ತು ಕನ್ನಡದ ಕುರಿತಾಗಿ ಉಪನ್ಯಾಸ ನೀಡಿದ್ದಾರೆ.

ನಾಗಮಂಡಲದಲ್ಲಿನ ಅಭಿನಯಕ್ಕೆ ರಾಜ್ಯಸರ್ಕಾರದ ಶ್ರೇಷ್ಠ ಪೋಷಕನಟ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಂಗಭೀಷ್ಮ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಮುಂತಾದವುಗಳು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಜ್ಯೂರಿಗಳ ವಿಶೇಷ ಮನ್ನಣೆಗೆ ಪಾತ್ರವಾದ ಉಪ್ಪಿನ ಕಾಗದ ಚಿತ್ರದ ಮುಖ್ಯ ಪಾತ್ರ.
ಮೈಸೂರಿನಲ್ಲಿ ‘ನಟನ’ ರಂಗಶಾಲೆ ಜೊತೆಯಲ್ಲೇ ನಟನ ರಂಗಮಂದಿರ ಕಟ್ಟಿ, ನೂರಾರು ಕಲಾವಿದರನ್ನು ಬೆಳೆಸಿ ಮೈಸೂರಿನಲ್ಲಿ ರಂಗಕಾಯಕಕ್ಕೆ ಒಂದು ಪ್ರತಿಷ್ಠೆಯನ್ನು ತಂದುಕೊಟ್ಟಿರುವ ಅಪರೂಪದ ಸಾಂಸ್ಕೃತಿಕ ಸಾಧಕ ಇವರು. ಇಂಥ ರಂಗ ಸಾಧಕ ಮಂಡ್ಯ ರಮೇಶ್ ಅವರಿಗೆ 2017ರ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಕರ್ನಾಟಕ ನಾಟಕ ಅಕಾಡೆಮಿಯು ಗೌರವಿಸಿದೆ.
ಮೈಸೂರು ವಿಶ್ವವಿದ್ಯಾನಿಲಯದ ಗುಬ್ಬಿ ವೀರಣ್ಣ ರಂಗಪೀಠಕ್ಕೆ ಎರಡನೇ ಅವಧಿಗೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸಂಸ್ಕೃತಿ ಇಲಾಖೆಯಲ್ಲಿ ಅವಜ್ಞಿತ ಕಲಾ ಪರಂಪರೆ ತಜ್ಞರ ಸಮಿತಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.
ಮಂಡ್ಯ ರಮೇಶ್ ಅವರ ನೇತೃತ್ವದ ನಟನ ರಂಗಶಾಲೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ದೊರೆತಿದೆ. ಮೈಸೂರಿನಲ್ಲಿ ನಟನ ರಂಗಮಂದಿರ ನಿರ್ಮಿಸಿ, ನಟನ ರಂಗಶಾಲೆ, ನಟನ ಮಕ್ಕಳ ರಂಗಶಾಲೆಯನ್ನು ನಿರಂತರವಾಗಿ ಪೋಷಿಸಿಕೊಂಡು ಬರುತ್ತಿದ್ದಾರೆ. ಜೀ ಕನ್ನಡದ ಪ್ರತಿಷ್ಠಿತ ಕಾರ್ಯಕ್ರಮ ರಮೇಶ್ ಅರವಿಂದ್ ಅವರು ನಡೆಸಿಕೊಡುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ರಂಗಭೂಮಿ ಸಾಧನೆಗಾಗಿ ಸಾಧಕರ ಕುರ್ಚಿಯನ್ನು ಅಲಂಕರಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post