ಕಲ್ಪ ಮೀಡಿಯಾ ಹೌಸ್ | ಉಡುಪಿ |
ಲೌಡ್ ಸ್ಪೀಕರ್ ಕುರಿತಾಗಿ ಸುಪ್ರೀಂ ಕೋರ್ಟ್ ಆದೇಶ ಹಿಂದೂ ಧರ್ಮಕ್ಕೂ ಅನ್ವಯವಾಗುವ ಹಿನ್ನೆಲೆಯಲ್ಲಿ ಎಲ್ಲ ಹಿಂದೂ ಧಾರ್ಮಿಕ ಕೇಂದ್ರಗಳು ಇದನ್ನು ಪಾಲಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು Shri Vishwa Prasanna Theertha ಕರೆ ನೀಡಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾವುಗಳೇ ರಚಿಸಿಕೊಂಡ ಸಂವಿಧಾನ, ಸರ್ಕಾರ, ಕೋರ್ಟ್‌ಗಳನ್ನು ನಾವು ಗೌರವಿಸಲೇಬೇಕು. ಇವುಗಳ ಆದೇಶಕ್ಕೆ ಪ್ರತಿಯೊಬ್ಬರೂ ಬದ್ಧರಾಗಿ ನಡೆದುಕೊಳ್ಳಬೇಕು. ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ನೀಡಿದ್ದು, ಈ ನಿಯಮವನ್ನು ಸಮಸ್ತ ಹಿಂದೂಗಳು ಪಾಲಿಸಬೇಕು ಎಂದರು.
ಸುಪ್ರೀಂ ಕೋರ್ಟ್ ಒಂದು ವರ್ಗ, ಒಂದು ಸಮಾಜಕ್ಕೆ ಆದೇಶ ನೀಡಿಲ್ಲ. ಆದೇಶ ಎಲ್ಲರಿಗೂ ಅನ್ವಯವಾಗುತ್ತದೆ. ಶಬ್ದದ ತೀವ್ರತೆಗೊಂದು ನಿಯಮ ನಿಗದಿಯಾಗಿದೆ. ಇದರಿಂದಾಗಿ ಹಿಂದೂ ಧಾರ್ಮಿಕ ಕೇಂದ್ರಗಳೂ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದರು.
Also read: ನಟಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಿ ನಟ ದಿಲೀಪ್ ಸ್ನೇಹಿತ ಶರತ್ ನಾಯರ್ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post