ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕರಾವಳಿ ಜನರು ಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತರಾಗಬೇಕು. ಮತ್ತು ಕೂಡಲೇ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಬೇಕು ಎಂದು ಪೇಜಾವರ ಶ್ರೀ ವಿಶ್ಚಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ವೇಳೆ ಕರಾವಳಿಯಲ್ಲಿ ಉಗ್ರಕೃತ್ಯಗಳು ನಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದ್ದು, ಹೀಗಾಗಿ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು. ಸಮಾಜದಲ್ಲಿ ದುಷ್ಕೃತ್ಯ ಎಸಗುವವರು ಹಿಂದೂ ಸಮಾಜದ ಮೇಲೆ ಹೇರುವ ನಿಟ್ಟಿನಲ್ಲಿ ಈ ಚಟುವಟಿಕೆ ನಡೆಸುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಮೊಬೈಲ್ ಹಾಗೂ ದಾಖಲೆ ಕಳೆದುಹೋದರೆ ಸಂಬಂಧಪಟ್ಟ ಇಲಾಖೆಗೆ ತಕ್ಷಣ ಮಾಹಿತಿ ನೀಡಿ.ಇಲ್ಲವಾದರೆ ಇಂತಹ ಸಂದರ್ಭದಲ್ಲಿ ಸಂದೇಹಕ್ಕೆ ಒಳಗಾಗಬೇಕಾಗುತ್ತೆ ಎಂದು ಹೇಳಿದ್ದಾರೆ.
ಉತ್ಥಾನ ದ್ವಾದಶಿ ಬಳಿಕ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವ ಸೇರಿದಂತೆ ಜನಸಂದಣಿ ಹೆಚ್ಚಿರುವ ಸಮಾರಂಭ ನಡೆಯುತ್ತಿರುತ್ತವೆ ಇಂತಹ ಸ್ಥಳಗಳಲ್ಲಿ ಅನಾಹುತ ನಡೆದಲ್ಲಿ ಸಮಾಜಕ್ಕೆ ದೊಡ್ಡ ಹಾನಿ. ಪ್ರತಿಯೊಬ್ಬರೂ ಈ ಬಗ್ಗೆ ಸದಾ ಜಾಗೃತರಾಗಿಬೇಕು ಎಂದು ಶ್ರೀಗಳು ಹೇಳಿದ್ದಾರೆ.
Also read: ಗಮನಿಸಿ! ನ.29ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post