ಕಲ್ಪ ಮೀಡಿಯಾ ಹೌಸ್
ಮಣಿಪಾಲ: ನಗರದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಗಾಗಿ ಕರೆತರುವ ಮುನ್ನ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಬರುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮನವಿ ಮಾಡಿದ್ದಾರೆ.
ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ಐಸಿಯು ಅವಶ್ಯವಿರುವ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸದ್ಯದ ಮಟ್ಟಿಗೆ ತೀವ್ರ ನಿಘಾ ಘಟಕ (ಐಸಿಯು) ಹಾಸಿಗೆಗಳು ಮತ್ತು ವೆಂಟಿಲೇಟರ್ ಹಾಸಿಗೆಗಳ ತೀವ್ರ ಕೊರತೆಯಂಟಾಗಿದೆ. ಆದ್ದರಿಂದ ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಸ್, ರೋಗಿಗಳು/ರೋಗಿಗಳ ಆರೈಕೆದಾರರು, ಆಂಬ್ಯುಲೆನ್ಸ್ ಸೇವಾ ಪೂರೈಕೆದಾರರು ತಮ್ಮ ಸ್ಥಳದಿಂದ ಹೊರಡುವ ಮುನ್ನ ದೂರವಾಣಿ ಸಂಖ್ಯೆ: 9686692603ಗೆ ಕರೆ ಮಾಡಿ ತೀವ್ರ ನಿಘಾ ಘಟಕ (ಐಸಿಯು) ಹಾಸಿಗೆಗಳು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಆಸ್ಪತ್ರೆಗೆ ಬರಲು ತಿಳಿಸಿದ್ದಾರೆ.
ಐಸಿಯು ಹಾಸಿಗೆಗಳು ಮತ್ತು ವೆಂಟಿಲೇಟರುಗಳ ತೀವ್ರ ಕೊರತೆಯ ದೃಷ್ಟಿಯಿಂದ ಈ ಕರೆ ಮತ್ತು ದೃಢೀಕರಣವು ಅವಶ್ಯಕವಾಗಿದೆ. ಇದರಿಂದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತಮ್ಮ ರೋಗಿಗಳಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post