ಕಲ್ಪ ಮೀಡಿಯಾ ಹೌಸ್ | ಉಡುಪಿ |
ಡಿವೈಡರ್’ಗೆ ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿಯಲ್ಲಿ ನಡೆದಿದೆ.
ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಕ್ಷ್ಮೀಂದ್ರ ನಗರ ಬಳಿಯಲ್ಲಿ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಇಡಿಯ ಪ್ರದೇಶ ರಕ್ತಸಿಕ್ತವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















