ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #GeethaShivarajkumar ಹೇಳಿದರು.
ಉಡುಪಿ ಜಿಲ್ಲೆಯ ಬೈಂದೂರು #Byndoor ತಾಲೂಕಿನ ನಾಡ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ #Congress ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಡವ, ಶ್ರೀಮಂತ ಎಂಬ ಬೇಧಭಾವ ತೋರದೆ, ಪ್ರತಿಯೊಬ್ಬರಿಗೂ ನಮ್ಮ ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಅದೇ, ರೀತಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಬೈಂದೂರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗಲು ನನಗೆ ಅವಕಾಶ ಕಲ್ಪಿಸಿಕೊಡಿ ಎಂದರು.

ಶಿವಮೊಗ್ಗ- ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದುಳಿದಿದೆ ಎನ್ನುವ ಅಳಕನ್ನು ತೊಡೆದು ಹಾಕಿ, ಬಂಗಾರಪ್ಪ ಅವರ ಚಿಂತನೆಗಳಿಗೆ ಜೀವ ತುಂಬಬೇಕಿದೆ. ಇದಕ್ಕೆ ಮಾಜಿ ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕೆ. ಗೋಪಾಲ ಪೂಜಾರಿ ಅವರ ನೆರವು ಅಗತ್ಯ. ಕ್ಷೇತ್ರದಲ್ಲಿ ಎಲ್ಲಾ ವರ್ಗಗಳನ್ನೂ ಕ್ರೂಡೀಕರಿಸಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರ ಕಾರ್ಪೊರೇಟ್’ಗಳಿಗೆ ಮಣೆ ಹಾಕಿದೆ. ಅವರ ಆಪ್ತರು, ಸ್ನೇಹಿತರು ಜಗತ್ತಿನ ಅತೀ ಶ್ರೀಮಂತರಾಗಿ ಬೆಳೆಯುತ್ತಿದ್ದಾರೆ. ಅಲ್ಲದೆ, ಅಕ್ರಮ ಸಂಪತ್ತು ಕ್ರೂಢೀಕರಿಸಿಕೊಂಡು ಜಗತ್ತಿನ ಶ್ರೀಮಂತ ಪಕ್ಷವಾಗಿ ಬೆಳೆದು ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಗಲಭೆ ಹೆಚ್ಚಾಗಿದ್ದು, ಪ್ರಜಾತಾಂತ್ರಿಕ ಮೌಲ್ಯಗಳು ಗಾಳಿಗೆ ತೂರಿದೆ ಎಂದರು.

ನಟ ಶಿವರಾಜಕುಮಾರ್ #Shivarajkumar ಮಾತನಾಡಿ, ಕ್ಷೇತ್ರಕ್ಕೆ ಸ್ಟಾರ್ ನಟ ಬಂದಾಕ್ಷಣ ಬದಲಾವಣೆ ಆಗುವುದಿಲ್ಲ. ಬಡವರ ಸೇವೆ ಮಾಡುವ ನಾಯಕರನ್ನು ಮತದಾರರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಬಯಸುತ್ತಾರೆ. ನಾನಿಲ್ಲಿ ನಟನಾಗಿ ಬಂದಿಲ್ಲ. ಬದಲಾಗಿ, ಗೀತಾ ಅವರ ಗಂಡನಾಗಿ ಬಂದಿದ್ದೇನೆ. ನಿಮ್ಮ ನಂಬಿಕೆಗೆ ಅವರು ಮೋಸ ಮಾಡುವುದಿಲ್ಲ. ಒಂದು ಬಾರಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ವರಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೈಂದೂರು ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಜಿ.ಎ.ಭಾವ, ನಾಡದ ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಿವಿಂದ ಪೂಜಾರಿ, ರಾಜೇಶ್, ಕೆಪಿಸಿಸಿ ಸದಸ್ಯ ಪ್ರಕಾಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – editor@kalpa.news info@kalpa.news








Discussion about this post