ಕಲ್ಪ ಮೀಡಿಯಾ ಹೌಸ್
ಕಾರ್ಕಳ: ಇಂಡಿಯನ್ ಸೀನಿಯರ್ ಚೇಂಬರ್ ಕಾರ್ಕಳ ಲೀಜನ್ ಮೂರನೇ ವರ್ಷದ ಅಧ್ಯಕ್ಷರಾಗಿ ಚಂದ್ರಹಾಸ ಸುವರ್ಣ ಆಯ್ಕೆಯಾಗಿದ್ದಾರೆ.
ಬಹುಮುಖ ಪ್ರತಿಭೆಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇವರು ಮಾಜಿ ಪುರಸಭಾ ಅಧ್ಯಕ್ಷರು, ಕಲಾರಂಗ ಕಾರ್ಕಳ ಇದರ ಸಂಸ್ಥಾಪಕರು ಹಲವು ಸಂಸ್ಥೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು, ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಸಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರರಾಗಿ ಶಿರಡಿ ಸಾಯಿ ಡಿಗ್ರಿ ಕಾಲೇಜ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಸುಧಾಕರ್ ಪೂಜಾರಿ, ಕೋಶಾಧಿಕಾರಿಯಾಗಿ ಪ್ರವೀಣ್ ಅವರು ಆಯ್ಕೆಯಾಗಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post