ಕಲ್ಪ ಮೀಡಿಯಾ ಹೌಸ್ | ಉಡುಪಿ |
ಆಗುಂಬೆ ಘಾಟಿಯ Agumbe Ghat ಕೆಲವು ತಿರುವುಗಳಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಉಡುಪಿಯನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಜುಲೈ 27ರಿಂದ ಸೆ.15ರವರೆಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ.

Also read: ಚಾರ್ಮಡಿಯಲ್ಲಿ ಪ್ರವಾಹ ಎಂಬ ವೀಡಿಯೋ ವೈರಲ್: ಚಿಕ್ಕಮಗಳೂರು ಪೊಲೀಸರ ಸ್ಪಷ್ಟನೆಯೇನು?
ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಹೀಗಿದೆ:
ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಾಘಾಟ್- ಕಾರ್ಕಳ- ಉಡುಪಿ
ತೀರ್ಥಹಳ್ಳಿ-ಮಾಸ್ತಿಕಟ್ಟೆ- ಸಿದ್ಧಾಪುರ- ಕುಂದಾಪುರ- ಉಡುಪಿ











Discussion about this post