ಕಲ್ಪ ಮೀಡಿಯಾ ಹೌಸ್ | ಉಡುಪಿ |
ಸಂತೋಷ್ ಪಾಟೀಲ್ Santhosh Patil ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ. ವರಿಷ್ಠರಿಗೆ ವಿಷಯ ತಿಳಿದಿದೆ ಎಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್.ಐ.ಆರ್ ಆಗಿದೆ. ವಿವರಗಳನ್ನು ಪಡೆಯಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಈ ಬಗ್ಗೆ ದೂರವಾಣಿ ಮೂಲಕ ಹಾಗೂ ನೇರವಾಗಿ ಮಾತನಾಡುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.
Also read: ‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ
ಮುಖ್ಯಮಂತ್ರಿಗಳು ಸೂಚಿಸಿದರೆ ರಾಜಿನಾಮೆ ನೀಡುವುದಾಗಿ ಈಶ್ವರಪ್ಪ ಅವರು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ. ನೇರವಾಗಿ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post