ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ಸಂಭವಿಸಿದ ಅಗ್ನಿ #FireAccident ಅವಘಡದಲ್ಲಿ 7 ಮೀನುಗಾರಿಕಾ ಬೋಟ್ #FishingBoat ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೋಟ್’ಗಳನ್ನು ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಿ, ಬೋಟ್’ಗಳ #Boat ಮೇಲೆ ತೆಂಗಿನ ಗರಿಗಳನ್ನು ಹಾಸಲಾಗಿತ್ತು. ದೀಪಾವಳಿಗೆ ಹಚ್ಚಿನ ಪಟಾಕಿ ಸಿಡಿದು ಅಥವಾ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಹೇಳಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ಬೈಂದೂರು #Byndoor ಹಾಗೂ ಗಂಗೊಳ್ಳಿ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ. ಘಟನೆಯಿಂದ ದುರಂತದಲ್ಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post