ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದ್ದು, ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ. ಹಾಗೂ ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇತರ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಮನವಿ ಮಾಡಿದ್ದಾರೆ.
ನಿತ್ಯವೂ ಪೊಲೀಸರು ಮತ್ತು ಮಾಧ್ಯಮದವರು ಕಾಲೇಜಿಗೆ ಬರುತ್ತಿದ್ದಾರೆ, ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಪರೀಕ್ಷಾ ಸಮಯದಲ್ಲಿ ಇಂತಹ ವಾತಾವರಣ ಸೃಷ್ಟಿಯಾಗಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಮ್ಮ ಕಾಲೇಜಿಗೆ ಹಲವಾರು ದಶಕಗಳ ಇತಿಹಾಸವಿದೆ. ಇಲ್ಲಿ ಯಾವುದೇ ರೀತಿಯ ತಾರತಮ್ಯ ನಡೆಯುತ್ತಿಲ್ಲ. ವಿನಾಕಾರಣ ವಿವಾದ ಸೃಷ್ಟಿಸಿ ಗೊಂದಲ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ತತಕ್ಷಣ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post