ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ Lakshmi Hebalkar ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ Atal Bihari Vajapeyi ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಹಾಗೂ ಅಧಿಕಾರಿಗಳಿರುವುದು ಜನರ ಸಮಸ್ಯೆಗಳನ್ನು ಪರಿಹರಿಸಲು. ಇವುಗಳನ್ನು ಅರಿತು ನಾವುಗಳು ಕೆಲಸ ಮಾಡಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿರುವವರೆಗೂ ಇಲ್ಲಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ತಿಳಿಸಿದರು.

ಸಾಮಾನ್ಯವಾಗಿ ಪೊಲೀಸ್, ಅರಣ್ಯ, ಆರೋಗ್ಯ, ಕಂದಾಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ದಿನನಿತ್ಯ ಜನರು ಕೆಲಸಗಳನ್ನು ಅರಸಿ, ಬರುತ್ತಾರೆ. ಈ ರೀತಿ ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಅವರನ್ನು ಅಲೆಯುವಂತೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ತಮ್ಮ ಅಹಂ ಅನ್ನು ಬಿಟ್ಟು ಜನಸಾಮಾನ್ಯರ ಕಷ್ಟಗಳಿಗೆ ಹೃದಯವಂತರಾಗಿ ಸ್ಪಂದಿಸಬೇಕು ಎಂದರು.

Also read: ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಜನಸ್ನೇಹಿಯಾಗಿ ವ್ಯವಹರಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಾರ್ವಜನಿಕರಿಂದ ವಿವಿಧ ಅಹವಾಲು ಅರ್ಜಿ ಸ್ವೀಕರಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿ ಮನ್ನಾ ಜಾಗದ ಹಕ್ಕುಪತ್ರಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಕುಂದಾಪುರ ಉಪವಿಭಾಗಧಿಕಾರಿ ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post