ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕಾಂತಾರ #Kantara ಚಿತ್ರದಲ್ಲಿ ಅಭಿನಯಿಸಿದ್ದ ಕಲಾವಿದ ಇಂದು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಕಾಂತಾರ ಮೊದಲನೇಯ ಚಿತ್ರದಲ್ಲಿ ನ್ಯಾಯವಾದಿಯಾಗಿ ಅಭಿನಯಿಸಿದ್ದ ಪೆರ್ಡೂರು ಮೂಲದ ಟಿ. ಪ್ರಭಾಕರ್‌ಕಲ್ಯಾಣಿ ಮೃತಪಟ್ಟವರು. ಬ್ಯಾಂಕ್ ಆಫ್‌ಬರೋಡಾದ ನಿವೃತ್ತ ಉದ್ಯೋಗಿಯಾಗಿದ್ದ ಇವರು, ರಂಗಭೂಮಿ ಕಲಾವಿದರಾಗಿ ವಿವಿಧ ನಾಟಕದಲ್ಲಿ ಅಭಿನಯಿಸುವ ಮೂಲಕ ಗುರುತಿಸಿಕೊಂಡವರು.

ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತ ಅಂತ್ಯಕ್ರಿಯೆ ಇಂದು ಬೀಡಿನ ಗುಡ್ಡೆಯ ರುದ್ರಭೂಮಿಯಲ್ಲಿ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post