ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಜೆಇಇ ಮೈನ್ #JEEMain ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ #Udupi ಜಿಲ್ಲೆಯ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ #CreativePUCollege ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಕೀರ್ತಿ ತಂದಿದ್ದಾರೆ.
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆಇಇ ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಇದಾಗಿದೆ.
ಇದರಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಂ 99.1312779, ನೇಹಾ ಕೆ. ಉದಪುಡಿ 98.9485981, ಪ್ರಣವ್ ಟಿ.ಎಂ. 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ.ಕೆ. 98.287914, ಅಕುಲ್ ಕೃಷ್ಣ ಎಂ.ಎಸ್. 98.0229479, ಪಾರ್ಥ ಎ.ಬಿ. 98.0229479 ರಷ್ಟು ಅಂಕ ಗಳಿಸಿದ್ದಾರೆ.
ಈ ಮೂಲಕ ಪರೀಕ್ಷೆ ಬರೆದ 441 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಮುಂಬರುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.ಈ ಎಲ್ಲಾ ವಿದ್ಯಾರ್ಥಿಗಳು ಎನ್’ಐಟಿ ಅಂತಹ ಸಂಸ್ಥೆಗಳಲ್ಲಿ ಬಿಇ ಪದವಿಗೆ ಪ್ರವೇಶ ಪಡೆಯುವ ಅವಕಾಶದ ಜೊತೆಗೆ ಐಐಟಿ ಸಂಸ್ಥೆ ಸೇರಲು ಮಾನದಂಡವಾಗಿರುವ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ.
ಜೆಇಇ (ಮೈನ್) ಪರೀಕ್ಷೆಯಲ್ಲಿ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಜೆಇಇ ಸಂಯೋಜಕರಾದ ಎಚ್.ಬಿ. ನಂದೀಶ್ ಅವರು ಶ್ಲಾಘಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post