ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜಿಲ್ಲಾ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಅವರು ಇಂದು ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
Also Read>> ಕನ್ನಡ ಚಿತ್ರರಂಗದ ಮೇಲೆ ನನಗೆ ಸಿಟ್ಟಿದೆ | ಡಿಸಿಎಂ ಶಿವಕುಮಾರ್ ಹೀಗೆ ಹೇಳಿದ್ದೇಕೆ?
ಕಾಪುವಿನ ಹೊಸ ಮಾರಿಗುಡಿ ಗದ್ದುಗೆ #KaupMariGudi ಪ್ರತಿಷ್ಠಾಪನಾ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ನಡೆಯಿತು. ಅಲ್ಲದೇ, 10 ದಿನಗಳ ಕಾಲ ಮಾರಿಯಮ್ಮನ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳು ಪಾಲ್ಗೊಂಡರು.

ಹೊಸ ಮಾರಿಗುಡಿ ದೇಗುಲ ಪ್ರವೇಶಿಸಿದ ಡಿಕೆಶಿ, ಮಾರಿಯಮ್ಮನ ಚಿನ್ನದ ಗದ್ದುಗೆಯಲ್ಲಿ ಪ್ರತಿಷ್ಠಾಪನಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬ್ರಹ್ಮಕಲಶೋತ್ಸವ #BrahmaKalashotsava ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಸಿಎಂ ಶಿವಕುಮಾರ್ ಅವರನ್ನು ಕ್ಷೇತ್ರದ ಪರವಾಗಿ ಬಿಜೆಪಿ ಶಾಸಕ ಗುಮೇರ್ ಸುರೇಶ್ ಶೆಟ್ಟಿ ಸನ್ಮಾನಿಸಿ, ಮಾರಿಯಮ್ಮನ ಮೂರ್ತಿ, ಪ್ರಸಾದ ನೀಡಿ ಗೌರವಿಸಿದರು.
ಕಾಪು ಹೊಸ ಮಾರಿಗುಡಿಗೆ ಡಿಸಿಎಂ ಶಿವಕುಮಾರ್ ಅವರು ತಮ್ಮ ಪತ್ನಿ ಉಷಾ ಹೆಸರಿನಲ್ಲಿ 9,99,999 ರೂಪಾಯಿ ದೇಣಿಗೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post