ಕಲ್ಪ ಮೀಡಿಯಾ ಹೌಸ್ | ಉಡುಪಿ |
ವಿಶ್ವ ಶಾಂತಿಯನ್ನ ಸಾರುವ ಅಮೃತಮಯವಾದ ಶ್ರೇಷ್ಠ ಗ್ರಂಥವಾದ ಶ್ರೀಮದ್ ಭಗವದ್ಗೀತಾ ಗ್ರಂಥವನ್ನು ಪ್ರತಿಯೊಬ್ಬರ ಮೂಲಕ ಬರಿಸುವಂತಹ “ಕೋಟಿಗೀತಾ ಲೇಖನ ಯಜ್ಞದೀಕ್ಷೆ” ಅಭಿಯಾನಕ್ಕೆ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರೊಂದಿಗೆ ಚಾಲನೆ ನೀಡಿದರು.
2024 ಜನವರಿ 18 ರಿಂದ ಪ್ರಾರಂಭಗೊಳ್ಳಲಿರುವ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನಾಲ್ಕನೆಯ ಶ್ರೀ ಕೃಷ್ಣ ಪೂಜಾ ಪರ್ಯಾಯ ಸಂಭ್ರಮದ ನಿಮಿತ್ತವಾಗಿ ಶ್ರೀ ಕೃಷ್ಣನ ಮುಖಾರವಿಂದದಿಂದಲೇ ಹೊರಹೊಮ್ಮಿದ ವಿಶ್ವ ಶಾಂತಿಯನ್ನ ಸಾರುವ ಅಮೃತಮಯವಾದ ಶ್ರೇಷ್ಠ ಗ್ರಂಥವಾದ ಶ್ರೀಮದ್ ಭಗವದ್ಗೀತಾ ಗ್ರಂಥವನ್ನು ಪ್ರತಿಯೊಬ್ಬರ ಮೂಲಕ ಬರಿಸುವ ಸದುದ್ದೇಶದಿಂದ ಈ “ಕೋಟಿ ಗೀತಾ ಲೇಖನ ಯಜ್ಞ” ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉದ್ಯಮಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















