ಕಲ್ಪ ಮೀಡಿಯಾ ಹೌಸ್ | ಉಡುಪಿ |
ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದರು.
ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು ನಡೆದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತುಗಳನ್ನಾಡಿದರು.

Also read: ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿಕೊಂಡಿರುವ ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಉಡುಪಿ ಜಿಲ್ಲೆಯ ಎಲ್ಲಾ ಗಣಕ ವಿಜ್ಞಾನ ಉಪನ್ಯಾಸಕರು ನಮ್ಮ ದೇಶ ಗಣಕೀಕೃತ ದೇಶವಾಗಲು ರಾಯಭಾರಿಗಳು. ನಮ್ಮ ವಿದ್ಯಾರ್ಥಿಗಳಿಗೆ ಗಣಕವಿಜ್ಞಾನ ಸರಿಯಾಗಿ ತಿಳಿಸಿಕೊಟ್ಟರೆ ನಮ್ಮ ದೇಶ ಗಣಕೀಕೃತದಲ್ಲಿ ಮತ್ತೊಂದು ಹೆಜ್ಜೆ ಇರಿಸಿದಂತೆ” ಎಂದು ಪ್ರೋತ್ಸಾಹದ ನುಡಿಗಳನ್ನು ಆಡಿದರು.

ಕಾರ್ಯಕ್ರಮವನ್ನು ನಿಕಟಪೂರ್ವ ಅಧ್ಯಕ್ಷರಾದ ರಾಮ ನಾಯ್ಕ ಸ್ವಾಗತಿಸಿ, ದಿವ್ಯ ಧನ್ಯವಾದವಿತ್ತು, ಗಾಯತ್ರಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post